೨ ಅರಸುಗಳು 18:33

ಜನಾಂಗಗಳ ದೇವರುಗಳಲ್ಲಿ ಯಾವ ನಾದರೂ ತನ್ನ ದೇಶವನ್ನು ಅಶ್ಶೂರಿನ ಅರಸನ ಕೈಗೆ ತಪ್ಪಿಸಿಬಿಟ್ಟದ್ದು ಉಂಟೋ?

ಸಂದರ್ಭದೊಂದಿಗೆ ಓದಿ · ೨ ಅರಸುಗಳು 18

31ಹಿಜ್ಕೀಯನ ಮಾತು ಕೇಳಬೇಡಿರಿ. ಅಶ್ಶೂರಿನ ಅರ ಸನು ಹೇಳುವದೇನಂದರೆ--ನೀವು ಸಾಯದೆ ಬದು ಕುವ ಹಾಗೆ ಕಾಣಿಕೆಯಿಂದ ನನ್ನ ಸಂಗಡ ಒಡಂಬಡಿಕೆ ಮಾಡಿ ನನ್ನ ಬಳಿಗೆ ಹೊರಟು ಬನ್ನಿರಿ.

32ನಾನು ಬಂದು ನಿಮ್ಮ ದೇಶದ ಹಾಗೆ ಧಾನ್ಯವೂ ದ್ರಾಕ್ಷಾರಸವೂ ಇರುವ ದೇಶಕ್ಕೆ, ರೊಟ್ಟಿಯೂ ದ್ರಾಕ್ಷೇ ತೋಟಗಳೂ ಇರುವ ದೇಶಕ್ಕೆ, ಎಣ್ಣೆಯನ್ನು ಕೊಡುವ ಇಪ್ಪೇ ಮರ ಗಳೂ ಜೇನೂ ಇರುವ ದೇಶಕ್ಕೆ, ನಿಮ್ಮನ್ನು ಕರಕೊಂಡು ಹೋಗುವ ವರೆಗೂ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷೇ ಫಲವನ್ನೂ ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯಲಿ. ಆದರೆ--ಕರ್ತನು ನಮ್ಮನ್ನು ತಪ್ಪಿಸುವನೆಂದು ಹಿಜ್ಕೀ ಯನು ನಿಮ್ಮನ್ನು ಪ್ರೇರೇಪಿಸುವಾಗ ಅವನ ಮಾತು ಕೇಳಬೇಡಿರಿ.

33ಜನಾಂಗಗಳ ದೇವರುಗಳಲ್ಲಿ ಯಾವ ನಾದರೂ ತನ್ನ ದೇಶವನ್ನು ಅಶ್ಶೂರಿನ ಅರಸನ ಕೈಗೆ ತಪ್ಪಿಸಿಬಿಟ್ಟದ್ದು ಉಂಟೋ?

34ಹಮಾತ್‌ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್‌, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು

35ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು.

೨ ಅರಸುಗಳು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी