ವಿಮೋಚನಕಾಂಡ 34:18

ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್‌ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್‌ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 34

16ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.

17ನೀನು ಎರಕಹೊಯ್ದ ವಿಗ್ರಹಗಳನ್ನು ಮಾಡಿ ಕೊಳ್ಳಬಾರದು.

18ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್‌ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್‌ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.

19ಪ್ರಥಮ ಗರ್ಭ ತೆರೆಯುವದೆಲ್ಲಾ ನನ್ನದೇ. ನಿಮ್ಮ ಪಶುಗಳಾಗಲಿ ಎತ್ತುಗಳಾಗಲಿ ಟಗರುಗಳಾಗಲಿ ಮೊದಲು ಹುಟ್ಟುವ ಗಂಡಾದವುಗಳೆಲ್ಲಾ ನನ್ನವೇ.

20ಕತ್ತೆಗಳಲ್ಲಿ ಗರ್ಭ ತೆರೆಯುವಂಥದ್ದನ್ನು ಕುರಿಮರಿ ಯಿಂದ ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ ಅದರ ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಕುಮಾರರ ಚೊಚ್ಚಲಾದವರನ್ನೆಲ್ಲಾ ವಿಮೋಚಿಸ ಬೇಕು. ನನ್ನ ಮುಂದೆ ಯಾರೂ ಬರೀಗೈಯಿಂದ ಕಾಣಿಸಿ ಕೊಳ್ಳಬಾರದು.

ವಿಮೋಚನಕಾಂಡ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी