ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು.
11ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಮಾತ್ರವಲ್ಲದೆ ಆತನ ತಿದ್ದುವಿಕೆಗೆ ಬೇಸರ ಗೊಳ್ಳಬೇಡ;
12ತಾನು ಮೆಚ್ಚುವ ಮಗನನ್ನು ತಂದೆಯು ಶಿಕ್ಷಿಸುವಂತೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವನನ್ನು ಆತನು ತಿದ್ದುವನು.
13ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು.
14ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ.
15ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ