ಮತ್ತಾಯನು 28:9

ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.

ಸಂದರ್ಭದೊಂದಿಗೆ ಓದಿ · ಮತ್ತಾಯನು 28

7ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.

8ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.

9ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.

10ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.

11ಅವರು ಹೋಗುತ್ತಿರುವಾಗ ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಪ್ರಧಾನ ಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು.

ಮತ್ತಾಯನು 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी