ಆಗ ಅರಸನು ಶಿಮ್ಮಿಗೆ --ನೀನು ಸಾಯುವದಿಲ್ಲ ಅಂದನು. ಇದಲ್ಲದೆ ಅರಸನು ಅವನಿಗೆ ಆಣೆ ಇಟ್ಟನು.
21ಆಗ ಚೆರೂಯಳ ಮಗನಾದ ಅಬೀ ಷೈಯು ಪ್ರತ್ಯುತ್ತರವಾಗಿ--ಕರ್ತನ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ ಅವನು ಅದಕ್ಕಾಗಿ ಕೊಲ್ಲಲ್ಪಡ ಬೇಕಲ್ಲವೋ ಅಂದನು.
22ಆದರೆ ದಾವೀದನು--ಚೆರೂಯಳ ಮಕ್ಕಳೇ, ಈಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈಹೊತ್ತು ಇಸ್ರಾಯೇಲಿನಲ್ಲಿ ಯಾವನಾದರೂ ಕೊಲೆಯಾಗಬಾರದು; ಯಾಕಂದರೆ ಈಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ನಾನು ತಿಳಿಯುತ್ತೇನಲ್ಲಾ ಅಂದನು.
23ಆಗ ಅರಸನು ಶಿಮ್ಮಿಗೆ --ನೀನು ಸಾಯುವದಿಲ್ಲ ಅಂದನು. ಇದಲ್ಲದೆ ಅರಸನು ಅವನಿಗೆ ಆಣೆ ಇಟ್ಟನು.
24ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.
25ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ ಅರಸನು ಅವನಿಗೆ--ಮೆಫೀಬೋಶೆತನೇ, ನೀನು ಯಾಕೆ ನನ್ನ ಸಂಗಡ ಬಾರದೆಹೋದಿ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ