ನೀವು ನನ್ನ ಹೆಸರಿನಲ್ಲಿ ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು.
12ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.
13ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
14ನೀವು ನನ್ನ ಹೆಸರಿನಲ್ಲಿ ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು.
15ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
16ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ