ದೂತನು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು--ಕರ್ತನು ನಮಗೆ ಪ್ರಕಟ ಮಾಡಿದ ಈ ಸಂಭವವನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
13ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ--
14ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
15ದೂತನು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು--ಕರ್ತನು ನಮಗೆ ಪ್ರಕಟ ಮಾಡಿದ ಈ ಸಂಭವವನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
16ಅವರು ಅವಸರದಿಂದ ಬಂದು ಮರಿಯಳನ್ನೂ ಯೋಸೇಫ ನನ್ನೂ ಗೋದಲಿಯಲ್ಲಿ ಮಲಗಿದ್ದ ಶಿಶುವನ್ನೂ ಕಂಡುಕೊಂಡರು.
17ಅವರು ಆತನನ್ನು ನೋಡಿದ ಮೇಲೆ ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ಮಾತನ್ನು ಎಲ್ಲಾ ಕಡೆಯಲ್ಲಿಯೂ ಪ್ರಕಟಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ