೧ ಪೇತ್ರನು 4:13

ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.

ಸಂದರ್ಭದೊಂದಿಗೆ ಓದಿ · ೧ ಪೇತ್ರನು 4

11ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ

12ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.

13ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.

14ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.

15ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು.

೧ ಪೇತ್ರನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी