ಲೂಕನು 6:35

ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,

ಸಂದರ್ಭದೊಂದಿಗೆ ಓದಿ · ಲೂಕನು 6

33ನಿಮಗೆ ಒಳ್ಳೇದನ್ನು ಮಾಡು ವವರಿಗೆ ನೀವು ಒಳ್ಳೇದನ್ನು ಮಾಡಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಅದರಂತೆಯೇ ಮಾಡುತ್ತಾರೆ.

34ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ.

35ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,

36ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರ ನೀವೂ ಕರುಣೆಯುಳ್ಳವರಾಗಿರ್ರಿ.

37ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.

ಲೂಕನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी