೨ ಸಮುವೇಲನು 6:17

ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 6

15ಈ ಪ್ರಕಾರ ದಾವೀದನೂ ಇಸ್ರಾಯೇಲ್‌ ಮನೆಯವರೆಲ್ಲರೂ ಕರ್ತನ ಮಂಜೂಷವನ್ನು ಆರ್ಭಟ ದಿಂದಲೂ ತುತೂರಿಯ ಶಬ್ದದಿಂದಲೂ ಬರಮಾಡಿ ದರು.

16ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.

17ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.

18ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ

19ಸ್ತ್ರೀ ಪುರುಷರಲ್ಲಿ ಒಬ್ಬೊಬ್ಬರಿಗೆ ಒಂದು ರೊಟ್ಟಿ ತುಂಡನ್ನೂ ಒಂದು ದೊಡ್ಡ ತುಂಡು ಮಾಂಸವನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಕೊಟ್ಟನು. ತರುವಾಯ ಜನರೆ ಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.

೨ ಸಮುವೇಲನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी