ಬಹಳ ಕೆಲಸದ ಮೂಲಕ ಕನಸು ಉಂಟಾಗುತ್ತದೆ; ಬಹು ಮಾತುಗಳಿಂದ ಮೂಢನ ಧ್ವನಿಯು ಗೊತ್ತಾಗುತ್ತದೆ;
1ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ.
2ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
3ಬಹಳ ಕೆಲಸದ ಮೂಲಕ ಕನಸು ಉಂಟಾಗುತ್ತದೆ; ಬಹು ಮಾತುಗಳಿಂದ ಮೂಢನ ಧ್ವನಿಯು ಗೊತ್ತಾಗುತ್ತದೆ;
4ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು.
5ಪ್ರಮಾಣಮಾಡಿ ತೀರಿಸದೆ ಇರುವದಕ್ಕಿಂತ ಪ್ರಮಾಣಮಾಡದೆ ಇರುವದು ಒಳ್ಳೇದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ