ಯೆಶಾಯ 28:14

ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ,

ಸಂದರ್ಭದೊಂದಿಗೆ ಓದಿ · ಯೆಶಾಯ 28

12ಆತನು ಮೊದಲು--ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ. ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪ ಶಮನ ಇದೇ ಎಂದು ಹೇಳಿದಾಗ್ಯೂ ಅವರು ಕೇಳ ಲಿಲ್ಲ.

13ಆದರೆ ಅವರು ಹೋಗಿ ಹಿಂದಕ್ಕೆ ಎಡವಿ ಮುರಿದುಕೊಳ್ಳುವ ಹಾಗೆಯೂ ಬೋನಿನಲ್ಲಿ ಹಿಡಿ ಯಲ್ಪಟ್ಟು ಸಿಕ್ಕಿಬೀಳುವ ಹಾಗೆಯೂ ಕರ್ತನ ವಾಕ್ಯವು ಅವರಿಗೆ ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ ಇರುವದು.

14ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ,

15ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?

16ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).

ಯೆಶಾಯ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी