ನೀನು ಎರಕಹೊಯ್ದ ವಿಗ್ರಹಗಳನ್ನು ಮಾಡಿ ಕೊಳ್ಳಬಾರದು.
15ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು.
16ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.
17ನೀನು ಎರಕಹೊಯ್ದ ವಿಗ್ರಹಗಳನ್ನು ಮಾಡಿ ಕೊಳ್ಳಬಾರದು.
18ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.
19ಪ್ರಥಮ ಗರ್ಭ ತೆರೆಯುವದೆಲ್ಲಾ ನನ್ನದೇ. ನಿಮ್ಮ ಪಶುಗಳಾಗಲಿ ಎತ್ತುಗಳಾಗಲಿ ಟಗರುಗಳಾಗಲಿ ಮೊದಲು ಹುಟ್ಟುವ ಗಂಡಾದವುಗಳೆಲ್ಲಾ ನನ್ನವೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ