ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು.
37ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.
38ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು.
39ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು.
40ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು.
41ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ