ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.
4ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು.
5ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.
6ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.
7ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ.
8ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ