ಕೀರ್ತನೆಗಳು 27:10

ನನ್ನ ತಂದೆತಾಯಂದಿರು ನನ್ನನ್ನು ತೊರೆದುಬಿಟ್ಟರೂ ಕರ್ತನು ನನ್ನನ್ನು ಸೇರಿಸಿಕೊಳ್ಳುತ್ತಾನೆ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 27

8ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು.

9ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ.

10ನನ್ನ ತಂದೆತಾಯಂದಿರು ನನ್ನನ್ನು ತೊರೆದುಬಿಟ್ಟರೂ ಕರ್ತನು ನನ್ನನ್ನು ಸೇರಿಸಿಕೊಳ್ಳುತ್ತಾನೆ.

11ಓ ಕರ್ತನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನನ್ನ ವಿರೋಧಿಗಳ ನಿಮಿತ್ತ ಸಮವಾದ ಹಾದಿಯಲ್ಲಿ ನನ್ನನ್ನು ನಡಿಸು.

12ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.

ಕೀರ್ತನೆಗಳು 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी