ಆದ ದರಿಂದ ನೀನೆದ್ದು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಪಾದಗಳನ್ನು ಇಡುವಷ್ಟರಲ್ಲಿ ನಿನ್ನ ಮಗನು ಸಾಯುವನು.
10ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
11ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ.
12ಆದ ದರಿಂದ ನೀನೆದ್ದು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಪಾದಗಳನ್ನು ಇಡುವಷ್ಟರಲ್ಲಿ ನಿನ್ನ ಮಗನು ಸಾಯುವನು.
13ಇದಲ್ಲದೆ ಸಮಸ್ತ ಇಸ್ರಾ ಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಡುವರು; ಯಾಕಂದರೆ ಯಾರೊಬ್ಬಾಮನ ವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು; ಯಾರೊಬ್ಬಾಮನ ಮನೆಯೊಳಗೆ ಅವನು ಇಸ್ರಾಯೇ ಲಿನ ದೇವರಾದ ಕರ್ತನ ದೃಷ್ಟಿಗೆ ಒಳ್ಳೆಯವನಾಗಿ ದ್ದನು.
14ಇದಲ್ಲದೆ ಕರ್ತನು ಇಸ್ರಾಯೇಲ್ಯರನ್ನು ಆಳುವದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯವರನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ