ವಿಮೋಚನಕಾಂಡ 12:14

ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 12

12ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.

13ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.

14ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.

15ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.

16ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು.

ವಿಮೋಚನಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी