ಆದರೆ ನಿಮ್ಮ ದೇವರಾದ ಕರ್ತನಿಗೆ ಅಂಟಿಕೊಂಡವರಾದ ನೀವೆಲ್ಲರು ಇಂದು ಬದುಕುತ್ತೀರಿ.
2ನಾನು ನಿಮಗೆ ಆಜ್ಞಾಪಿಸುವ ವಾಕ್ಯದ ಸಂಗಡ ಏನನ್ನೂ ಕೂಡಿಸಬೇಡಿರಿ; ಅದರಿಂದ ಏನನ್ನೂ ತೆಗೆಯಬೇಡಿರಿ; ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳಬೇಕು.
3ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?
4ಆದರೆ ನಿಮ್ಮ ದೇವರಾದ ಕರ್ತನಿಗೆ ಅಂಟಿಕೊಂಡವರಾದ ನೀವೆಲ್ಲರು ಇಂದು ಬದುಕುತ್ತೀರಿ.
5ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.
6ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ