ಯೆರೆಮಿಯ 2:9

ಆದದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯ ವಾಡುವೆನೆಂದು ಕರ್ತನು ಅನ್ನುತ್ತಾನೆ; ಇದಲ್ಲದೆ ನಿಮ್ಮ ಮಕ್ಕಳ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 2

7ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.

8ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.

9ಆದದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯ ವಾಡುವೆನೆಂದು ಕರ್ತನು ಅನ್ನುತ್ತಾನೆ; ಇದಲ್ಲದೆ ನಿಮ್ಮ ಮಕ್ಕಳ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.

10ಕಿತ್ತೀಮ್‌ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ; ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳುಕೊಳ್ಳಿರಿ; ಅಂಥದ್ದು (ಎಲ್ಲಿಯಾದರೂ) ಉಂಟೋ? ನೋಡಿರಿ.

11ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.

ಯೆರೆಮಿಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी