ಸೌಲನು ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು. ಅದೇ ಅವನು ಕಟ್ಟಿಸಿದ ಮೊದಲನೇ ಬಲಿಪೀಠವು.
33ಆಗ ಅವರು ಸೌಲನಿಗೆ--ಇಗೋ, ಜನರು ಮಾಂಸದ ಕೂಡ ರಕ್ತವನ್ನು ತಿನ್ನುವದರಿಂದ ಕರ್ತನಿಗೆ ವಿರೋಧವಾಗಿ ಪಾಪ ಮಾಡುತ್ತಾರೆಂದು ತಿಳಿಸಿದರು. ಅದಕ್ಕವನು--ನೀವು ದ್ರೋಹ ಮಾಡಿ ದಿರಿ; ಈಗ ಒಂದು ದೊಡ್ಡಕಲ್ಲನ್ನು ನನ್ನ ಬಳಿಗೆ ಹೊರ ಳಿಸಿ ಬಿಡಿರಿ ಅಂದನು.
34ಸೌಲನು ಅವರಿಗೆ--ನೀವು ಜನರಲ್ಲಿ ಚದರಿಹೋಗಿ ರಕ್ತ ಸಹಿತವಾಗಿ ತಿಂದು ಕರ್ತನಿಗೆ ವಿರೋಧವಾಗಿ ಪಾಪಮಾಡದೆ ಪ್ರತಿಯೊ ಬ್ಬನು ತನ್ನ ಎತ್ತನ್ನೂ ಕುರಿಯನ್ನೂ ನನ್ನ ಬಳಿಗೆ ತಂದು ಇಲ್ಲಿ ಕೊಯ್ದು ತಿನ್ನಿರಿ ಎಂಬದಾಗಿ ಹೇಳಿರಿ ಅಂದನು. ಆದದರಿಂದ ಜನರಲ್ಲಿ ಪ್ರತಿಯೊಬ್ಬನು ತನ್ನ ಎತ್ತನ್ನು ಆ ರಾತ್ರಿಯಲ್ಲಿ ತನ್ನ ಸಂಗಡ ತಕ್ಕೊಂಡು ಬಂದು ಅಲ್ಲಿ ಕೊಯ್ದರು.
35ಸೌಲನು ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು. ಅದೇ ಅವನು ಕಟ್ಟಿಸಿದ ಮೊದಲನೇ ಬಲಿಪೀಠವು.
36ಸೌಲನು ಜನರಿಗೆ--ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿಹೋಗಿ ಉದಯಕಾಲದ ವರೆಗೆ ಅವರನ್ನು ಸುಲುಕೊಂಡು ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು ಅಂದನು. ಅದಕ್ಕೆ ಜನರು--ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವದನ್ನೆಲ್ಲಾ ಮಾಡು ಅಂದರು. ಆಗ ಯಾಜಕನು--ದೇವರ ಸನ್ನಿಧಿಗೆ ಹೋಗೋಣ ಅಂದನು.
37ಸೌಲನು--ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ದೇವರ ಆಲೋಚನೆಯನ್ನು ಕೇಳಿದನು; ಆದರೆ ಆತನು ಅವನಿಗೆ ಆ ದಿವಸದಲ್ಲಿ ಪ್ರತ್ಯುತ್ತರ ಕೊಡದೆ ಹೋದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ