ಹೀಗೆಯೇ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಯ ಮೇಲೆ ತಿರುಗಿಬಿದ್ದರು.
17ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲ್ ಮಕ್ಕಳ ಮೇಲೆ ರೆಹ ಬ್ಬಾಮನು ಆಳಿದನು.
18ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲ್ಯರೆಲ್ಲರು ಅವನ ಮೇಲೆ ಕಲ್ಲೆ ಸೆದು ಕೊಂದುಹಾಕಿದರು. ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ತ್ವರೆಮಾಡಿ ತನ್ನ ರಥದ ಮೇಲೆ ಏರಿದನು.
19ಹೀಗೆಯೇ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಯ ಮೇಲೆ ತಿರುಗಿಬಿದ್ದರು.
20ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
21ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರು ವಾಯ ಸೊಲೊಮೋನನ ಮಗನಾದ ರೆಹಬ್ಬಾಮ ನಿಗೆ ರಾಜ್ಯವನ್ನು ತಿರುಗಿ ಬರಮಾಡುವ ಹಾಗೆ ಇಸ್ರಾ ಯೇಲಿನ ಮನೆಯ ಮೇಲೆ ಯುದ್ಧಮಾಡಲು ಬೆನ್ಯಾ ವಿಾನನ ಗೋತ್ರದ ಸಂಗಡ ಯೆಹೂದನ ಸಮಸ್ತ ಮನೆಯವರಲ್ಲಿ ಯುದ್ಧಮಾಡತಕ್ಕವರಾಗಿದ್ದು, ಆದು ಕೊಳ್ಳಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನರನ್ನು ಕೂಡಿ ಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ