ವಿಮೋಚನಕಾಂಡ 19:16

ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 19

14ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು.

15ಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು.

16ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.

17ಆಗ ಮೋಶೆಯು ಜನರನ್ನು ಪಾಳೆಯ ದೊಳಗಿಂದ ದೇವರನ್ನು ಸಂಧಿಸುವದಕ್ಕೆ ಹೊರಗೆ ಬರಮಾಡಿದನು; ಆಗ ಅವರು ಬೆಟ್ಟದ ಕೆಳಗೆ ನಿಂತು ಕೊಂಡರು.

18ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.

ವಿಮೋಚನಕಾಂಡ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी