ಆಮೋಸ 9:11

ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.

ಸಂದರ್ಭದೊಂದಿಗೆ ಓದಿ · ಆಮೋಸ 9

9ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.

10ಕೇಡು ನಮ್ಮನ್ನು ಹಿಂದಟ್ಟದು, ನಮ್ಮನ್ನು ತಡೆಯುವದಿಲ್ಲ ಎನ್ನುವ ನನ್ನ ಜನರಲ್ಲಿರುವ ಪಾಪಿಷ್ಠರು ಕತ್ತಿಯಿಂದ ಸಾಯುವರು.

11ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.

12ಆಗ ಅವರು ಎದೋ ಮಿನ ಮಿಕ್ಕಭಾಗವನ್ನೂ ನನ್ನ ಹೆಸರಿನಿಂದ ಕರೆಯಲ್ಪ ಡುವ ಎಲ್ಲಾ ಅನ್ಯಜನಾಂಗಗಳನ್ನೂ ಸ್ವಾಧೀನಮಾಡಿ ಕೊಳ್ಳುವರೆಂದು ಇದನ್ನು ಮಾಡುವವನಾದ ಕರ್ತನು ಹೇಳುತ್ತಾನೆ.

13ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು.

ಆಮೋಸ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी