ಮತ್ತಾಯನು 21:19

ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.

ಸಂದರ್ಭದೊಂದಿಗೆ ಓದಿ · ಮತ್ತಾಯನು 21

17ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.

18ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು.

19ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.

20ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು.

21ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ

ಮತ್ತಾಯನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी