ಮಲಾಕಿಯ 3:11

ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಮಲಾಕಿಯ 3

9ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ.

10ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

11ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

12ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು; ಯಾಕಂದರೆ ನೀವು ರಮ್ಯವಾದ ದೇಶವಾಗುವಿರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

13ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ.

ಮಲಾಕಿಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी