ಎಲ್ಲಾ ತಲೆಗಳು ಬೋಳಾಗುವವು; ಎಲ್ಲಾ ಗಡ್ಡಗಳು ಕ್ಷೌರವಾಗುವವು; ಎಲ್ಲಾ ಕೈಗಳ ಮೇಲೆ ಗಾಯಗಳೂ ಸೊಂಟಗಳ ಮೇಲೆ ಗೋಣಿತಟ್ಟು ಇರುವವು.
35ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ ತನ್ನ ದೇವರುಗಳಿಗೆ ಧೂಪ ಸುಡುವವನನ್ನೂ ಮೋವಾಬಿನಲ್ಲಿ ನಿಲ್ಲಿಸಿಬಿಡು ವೆನೆಂದು ಕರ್ತನು ಅನ್ನುತ್ತಾನೆ.
36ಆದದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವದು, ನನ್ನ ಹೃದಯವು ಕೀರ್ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡು ವದು. ಅವನು ಮಾಡಿಕೊಂಡ ದ್ರವ್ಯನಾಶವಾಯಿತು.
37ಎಲ್ಲಾ ತಲೆಗಳು ಬೋಳಾಗುವವು; ಎಲ್ಲಾ ಗಡ್ಡಗಳು ಕ್ಷೌರವಾಗುವವು; ಎಲ್ಲಾ ಕೈಗಳ ಮೇಲೆ ಗಾಯಗಳೂ ಸೊಂಟಗಳ ಮೇಲೆ ಗೋಣಿತಟ್ಟು ಇರುವವು.
38ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿರು ವದು. ಮೆಚ್ಚದ ಪಾತ್ರೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆಂದು ಕರ್ತನು ಅನ್ನುತ್ತಾನೆ.
39ಅದು ಹೇಗೆ ಮುರಿದು ಹೋಯಿತು! ಮೋವಾಬು ಹೇಗೆ ನಾಚಿಕೆಪಟ್ಟು ಬೆನ್ನು ತಿರುಗಿಸಿತು ಎಂದು ಗೋಳಿಡುವರು. ಹೀಗೆ ಮೋವಾಬು ಅದರ ಸುತ್ತಲಿರು ವವರೆಲ್ಲರಿಗೆ ಹಾಸ್ಯಕ್ಕೂ ಹೆದರಿಕೆಗೂ ಆಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ