ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು.
17ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು.
18ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು.
19ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು.
20ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.
21ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ