ವಿಮೋಚನಕಾಂಡ 23:25

ನೀವು ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಬೇಕು. ಆಗ ಆತನು ನಿಮ್ಮ ರೊಟ್ಟಿಯನ್ನೂ ನೀರನ್ನೂ ಆಶೀರ್ವದಿಸುವನು, ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿ ಬಿಡುವೆನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 23

23ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.

24ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.

25ನೀವು ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಬೇಕು. ಆಗ ಆತನು ನಿಮ್ಮ ರೊಟ್ಟಿಯನ್ನೂ ನೀರನ್ನೂ ಆಶೀರ್ವದಿಸುವನು, ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿ ಬಿಡುವೆನು.

26ಗರ್ಭಸ್ರಾವವಾಗಲಿ ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವದಿಲ್ಲ; ನಿನ್ನ ದಿನಗಳ ಲೆಕ್ಕವನ್ನು ಪೂರ್ತಿಮಾಡುವೆನು.

27ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು.

ವಿಮೋಚನಕಾಂಡ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी