ಯಾಜಕಕಾಂಡ 21:7

ಅವರು ವ್ಯಭಿಚಾರಿಯನ್ನು ಇಲ್ಲವೆ ಅಪವಿತ್ರಳನ್ನು ಹೆಂಡತಿಯಾಗಿ ತೆಗೆದುಕೊಳ್ಳಬಾರದು; ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯನ್ನು ತೆಗೆದು ಕೊಳ್ಳಬಾರದು; ಅವನು ತನ್ನ ದೇವರಿಗೆ ಪರಿಶುದ್ಧ ನಾಗಿದ್ದಾನೆ.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 21

5ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿ ಕೊಳ್ಳಬಾರದು. ತಮ್ಮ ಶರೀರವನ್ನು ಕೊಯ್ದುಕೊಳ್ಳ ಬಾರದು.

6ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು.

7ಅವರು ವ್ಯಭಿಚಾರಿಯನ್ನು ಇಲ್ಲವೆ ಅಪವಿತ್ರಳನ್ನು ಹೆಂಡತಿಯಾಗಿ ತೆಗೆದುಕೊಳ್ಳಬಾರದು; ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯನ್ನು ತೆಗೆದು ಕೊಳ್ಳಬಾರದು; ಅವನು ತನ್ನ ದೇವರಿಗೆ ಪರಿಶುದ್ಧ ನಾಗಿದ್ದಾನೆ.

8ಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು.

9ಯಾವದೇ ಯಾಜಕನ ಮಗಳು ವ್ಯಭಿ ಚಾರ ಕೃತ್ಯದಿಂದ ತನ್ನನ್ನು ಅಪವಿತ್ರಮಾಡಿಕೊಂಡರೆ ಅವಳು ತನ್ನ ತಂದೆಯನ್ನು ಅಪವಿತ್ರಮಾಡುತ್ತಾಳೆ; ಅವಳನ್ನು ಬೆಂಕಿಯಿಂದ ಸುಡಬೇಕು.

ಯಾಜಕಕಾಂಡ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी