ಯಾಕೋಬನು 1:23

ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು.

ಸಂದರ್ಭದೊಂದಿಗೆ ಓದಿ · ಯಾಕೋಬನು 1

21ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.

22ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.

23ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು.

24ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು.

25ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.

ಯಾಕೋಬನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी