ಯೆರೆಮಿಯ 44:8

ಯಾಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ ನಿಂದೆಯೂ ಆಗುವ ಹಾಗೆಯೂ ನೀವು ತಂಗುವದಕ್ಕೆ ಹೋಗಿರುವ ಐಗುಪ್ತದೇಶದಲ್ಲಿ ಬೇರೆ ದೇವರುಗಳಿಗೆ ಧೂಪಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?

ಸಂದರ್ಭದೊಂದಿಗೆ ಓದಿ · ಯೆರೆಮಿಯ 44

6ಆದದರಿಂದ ನನ್ನ ಉರಿಯೂ ನನ್ನ ಕೋಪವೂ ಹೊಯ್ಯಲ್ಪಟ್ಟು, ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು; ಅವು ಈ ಹೊತ್ತಿನಂತೆ ಹಾಳೂ ಬೀಡೂ ಆದವು.

7ಆದದರಿಂದ ಈಗ ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರೂ ಆಗಿರುವ ಕರ್ತನು ಹೀಗೆ ಹೇಳುತ್ತಾನೆ--ಯಾಕೆ ನಿಮಗೆ ಉಳಿದಿರುವ ವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ ಹೆಂಗಸರನ್ನೂ ಮಗುವನ್ನೂ ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು ನಿಮ್ಮ ಪ್ರಾಣ ಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳು ತ್ತೀರಿ?

8ಯಾಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ ನಿಂದೆಯೂ ಆಗುವ ಹಾಗೆಯೂ ನೀವು ತಂಗುವದಕ್ಕೆ ಹೋಗಿರುವ ಐಗುಪ್ತದೇಶದಲ್ಲಿ ಬೇರೆ ದೇವರುಗಳಿಗೆ ಧೂಪಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?

9ಯೆಹೂದದ ದೇಶದಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ತಂದೆಗಳ ಕೆಟ್ಟತನಗಳನ್ನೂ ಯೆಹೂದದ ಅರಸರ ಕೆಟ್ಟತನಗಳನ್ನೂ ಅವರ ಹೆಂಡತಿಯರ ಕೆಟ್ಟತನಗಳನ್ನೂ ನಿಮ್ಮ ಸ್ವಂತ ಕೆಟ್ಟತನಗಳನ್ನೂ ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ?

10ಈ ದಿನದ ವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ; ನಾನು ನಿಮ್ಮ ಮುಂದೆಯೂ ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನ್ಯಾಯ ಪ್ರಮಾಣದಲ್ಲಿಯೂ ನನ್ನ ನಿಯಮಗಳಲ್ಲಿಯೂ ನಡೆಯಲಿಲ್ಲ.

ಯೆರೆಮಿಯ 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी