ದಾನಿಯೇಲನು 12:3

ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;

ಸಂದರ್ಭದೊಂದಿಗೆ ಓದಿ · ದಾನಿಯೇಲನು 12

1ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.

2ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.

3ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;

4ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.

5ಆಗ ದಾನಿಯೇಲನೆಂಬ ನಾನು ನೋಡಿದೆನು; ಇಗೋ, ಬೇರೆ ಇಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ ಮತ್ತೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು.

ದಾನಿಯೇಲನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी