ಯೆಹೆಜ್ಕೇಲನು 45:7

ಕಾಣಿಕೆಯಾದ ಪರಿಶುದ್ಧ ಭಾಗಕ್ಕೂ ನಗರದ ಸ್ವಾಸ್ತ್ಯಕ್ಕೂ ಈ ಕಡೆಯಲ್ಲಿಯೂ ಆ ಕಡೆಯಲ್ಲಿಯೂ ಕಾಣಿಕೆಯಾದ ಪರಿಶುದ್ಧ ಭಾಗದ ಮುಂದೆಯೂ ಪಟ್ಟಣದ ಸ್ವಾಸ್ತ್ಯದ ಮುಂದೆಯೂ ಅದರ ಪಶ್ಚಿಮದ ಕಡೆಯಲ್ಲಿ ಪಶ್ಚಿಮಕ್ಕೂ ಅದರ ಪೂರ್ವದ ಕಡೆಯಲ್ಲಿ ಪೂರ್ವಕ್ಕೂ ಪ್ರಭುವಿಗೆ ಪಾಲು ಇರಬೇಕು; ಅದರ ಉದ್ದವು ಭಾಗಗಳಲ್ಲಿ ಒಂದಕ್ಕೆ ಎದುರಾಗಿ, ಪಶ್ಚಿಮ ಮೇರೆ ಮೊದಲುಗೊಂಡು ಪೂರ್ವ ಮೇರೆಯ ತನಕ ಇರಬೇಕು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 45

5ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆಮಾಡುವ ಲೇವಿಯರಿಗೆ ತಮಗೆ ಸ್ವಾಸ್ತ್ಯವಾಗಿ ಇಪ್ಪತ್ತು ಕೊಠಡಿ ಗಳಿಗಾಗಿ ಇರಬೇಕು.

6ನೀವು ಪಟ್ಟಣದ ಸ್ವಾಸ್ತ್ಯವನ್ನು ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು, ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವದು.

7ಕಾಣಿಕೆಯಾದ ಪರಿಶುದ್ಧ ಭಾಗಕ್ಕೂ ನಗರದ ಸ್ವಾಸ್ತ್ಯಕ್ಕೂ ಈ ಕಡೆಯಲ್ಲಿಯೂ ಆ ಕಡೆಯಲ್ಲಿಯೂ ಕಾಣಿಕೆಯಾದ ಪರಿಶುದ್ಧ ಭಾಗದ ಮುಂದೆಯೂ ಪಟ್ಟಣದ ಸ್ವಾಸ್ತ್ಯದ ಮುಂದೆಯೂ ಅದರ ಪಶ್ಚಿಮದ ಕಡೆಯಲ್ಲಿ ಪಶ್ಚಿಮಕ್ಕೂ ಅದರ ಪೂರ್ವದ ಕಡೆಯಲ್ಲಿ ಪೂರ್ವಕ್ಕೂ ಪ್ರಭುವಿಗೆ ಪಾಲು ಇರಬೇಕು; ಅದರ ಉದ್ದವು ಭಾಗಗಳಲ್ಲಿ ಒಂದಕ್ಕೆ ಎದುರಾಗಿ, ಪಶ್ಚಿಮ ಮೇರೆ ಮೊದಲುಗೊಂಡು ಪೂರ್ವ ಮೇರೆಯ ತನಕ ಇರಬೇಕು.

8ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸ್ವಾಸ್ತ್ಯವಾಗಿರುವದು; ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವಪಡಿಸು ವದೇ ಇಲ್ಲ; ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲ್ಪಡುವದು.

9ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲನು 45 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी