ಯೋವೇಲ 1:4

ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.

ಸಂದರ್ಭದೊಂದಿಗೆ ಓದಿ · ಯೋವೇಲ 1

2ವೃದ್ಧರೇ, ಕೇಳಿರಿ! ದೇಶನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ; ಇದು ನಿಮ್ಮ ದಿವಸಗಳಲ್ಲಾದರೂ ನಿಮ್ಮ ತಂದೆಗಳ ದಿವಸಗಳಲ್ಲಾದರೂ ಉಂಟಾಯಿತೋ?

3ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ನಿಮ್ಮ ಮಕ್ಕಳು ತಮ್ಮ ಮಕ್ಕಳಿಗೂ ಅವರ ಮಕ್ಕಳು ಮತ್ತೊಂದು ತಲಾಂತರಕ್ಕೂ ತಿಳಿಸಲಿ.

4ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.

5ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ.

6ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು.

ಯೋವೇಲ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी