ಪ್ರಲಾಪಗಳು 1:18

ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.

ಸಂದರ್ಭದೊಂದಿಗೆ ಓದಿ · ಪ್ರಲಾಪಗಳು 1

16ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.

17ಚೀಯೋನ್‌ ತನ್ನ ಕೈಗಳನ್ನು ಚಾಚುತ್ತಾಳೆ; ಅಲ್ಲಿ ಅವಳನ್ನು ಆದರಿಸುವವನು ಒಬ್ಬನೂ ಇಲ್ಲ; ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಕರ್ತನು ಆಜ್ಞಾಪಿಸಿದ್ದಾನೆ. ಯೆರೂಸಲೇಮು ಅವರ ಮದ್ಯದಲ್ಲಿ ಮುಟ್ಟಾದ ಹೆಂಗಸಿನ ಹಾಗೆ ಇದೆ.

18ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.

19ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.

20ಓ ಕರ್ತನೇ, ನೋಡು; ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಕರುಳುಗಳು ನನ್ನ ಹೃದಯವು ಮಗಚಿಕೊಂಡಿದೆ. ನಾನು ಘೋರವಾಗಿ ತಿರುಗಿಬಿದ್ದಿದ್ದೇನೆ. ಹೊರಗೆ ಕತ್ತಿ ಯಿಂದ ಸಂಹಾರ, ಮನೆಯೊಳಗೆ ಮರಣ.

ಪ್ರಲಾಪಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी