ತರುವಾಯ ಏಸಾವನು--ನಾವು ಮುಂದಕ್ಕೆ ಪ್ರಯಾಣ ಮಾಡುವಂತೆ ಹೊರಡೋಣ, ನಾನು ನಿನ್ನ ಮುಂದೆ ಹೋಗುವೆನು ಅಂದನು.
10ಆಗ ಯಾಕೋಬನು--ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತಕ್ಕೊಳ್ಳಬೇಕು. ಯಾಕಂದರೆ ನಾನು ದೇವರ ಮುಖವನ್ನು ಕಂಡ ಹಾಗೆ ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ
11ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.
12ತರುವಾಯ ಏಸಾವನು--ನಾವು ಮುಂದಕ್ಕೆ ಪ್ರಯಾಣ ಮಾಡುವಂತೆ ಹೊರಡೋಣ, ನಾನು ನಿನ್ನ ಮುಂದೆ ಹೋಗುವೆನು ಅಂದನು.
13ಅದಕ್ಕೆ ಯಾಕೋಬನು ಅವನಿಗೆ--ಮಕ್ಕಳು ಎಳೇ ಪ್ರಾಯದವರಾಗಿದ್ದಾರೆ. ಇದಲ್ಲದೆ ಎಳೇ ದನಕುರಿಗಳು ನನ್ನ ಬಳಿಯಲ್ಲಿರುವದು ನನ್ನ ಒಡೆಯನಿಗೆ ತಿಳಿದದೆ; ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಎಲ್ಲಾ ಮಂದೆಯು ಸತ್ತುಹೋದಾವು.
14ಆದದರಿಂದ ನನ್ನ ಒಡೆಯನೇ, ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯಾರಿಗೆ ಬರುವ ವರೆಗೆ ನನ್ನ ಮುಂದಿರುವ ಮಂದೆಗಳ ನಡಿಗೆಗೂ ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ