ಬೆಳಗಾದ ಮೇಲೆ ನ್ಯಾಯಾಧಿಪತಿಗಳು--ಆ ಮನುಷ್ಯರನ್ನು ಬಿಟ್ಟುಬಿಡು ಎಂದು ಸಿಪಾಯಿಗಳ ಮೂಲಕ ಹೇಳಿಕಳುಹಿಸಿದರು.
33ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು.
34ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.
35ಬೆಳಗಾದ ಮೇಲೆ ನ್ಯಾಯಾಧಿಪತಿಗಳು--ಆ ಮನುಷ್ಯರನ್ನು ಬಿಟ್ಟುಬಿಡು ಎಂದು ಸಿಪಾಯಿಗಳ ಮೂಲಕ ಹೇಳಿಕಳುಹಿಸಿದರು.
36ಸೆರೆಯ ಅಧಿ ಕಾರಿಯು ಈ ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.
37ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ