೧ ಅರಸುಗಳು 3:17

ಅವರಲ್ಲಿ ಒಬ್ಬಳು--ಓ ನನ್ನ ಒಡೆಯನೇ, ನಾನೂ ಈ ಹೆಂಗಸೂ ಒಂದೇ ಮನೆಯಲ್ಲಿ ವಾಸವಾಗಿದ್ದೇವೆ.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 3

15ಆಗ ಸೊಲೊಮೋನನು ಎಚ್ಚತ್ತಾಗ ಇಗೋ, ಅದು ಸ್ವಪ್ನವಾಗಿತ್ತು, ಅವನು ಯೆರೂ ಸಲೇಮಿಗೆ ಬಂದು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತನ್ನ ಸೇವಕರಿಗೆ ಔತಣ ಮಾಡಿಸಿದನು.

16ತರುವಾಯ ಇಬ್ಬರು ವೇಶ್ಯಾಸ್ತ್ರೀಯರು ಅರಸನ ಬಳಿಗೆ ಬಂದು ಅವನ ಮುಂದೆ ನಿಂತರು.

17ಅವರಲ್ಲಿ ಒಬ್ಬಳು--ಓ ನನ್ನ ಒಡೆಯನೇ, ನಾನೂ ಈ ಹೆಂಗಸೂ ಒಂದೇ ಮನೆಯಲ್ಲಿ ವಾಸವಾಗಿದ್ದೇವೆ.

18ನಾನು ಅವಳ ಸಂಗಡ ಮನೆಯಲ್ಲಿರುವಾಗ ಮಗುವನ್ನು ಹೆತ್ತೆನು. ನಾನು ಹೆತ್ತ ಮೂರು ದಿವಸಗಳ ತರುವಾಯ ಈ ಹೆಂಗಸು ಕೂಡ ಹೆತ್ತಳು. ನಾವು ಇಬ್ಬರೂ ಕೂಡಿಯೇ ಇದ್ದೆವು.

19ಮನೆಯಲ್ಲಿ ನಮ್ಮ ಇಬ್ಬರ ಹೊರತು ನಮ್ಮ ಸಂಗಡ ಮತ್ತಾರೂ ಇಲ್ಲ. ಆದರೆ ಅವಳು ಅದರ ಮೇಲೆ ಹೊರಳಿದ್ದರಿಂದ ರಾತ್ರಿಯಲ್ಲಿ ಈ ಹೆಂಗಸಿನ ಮಗುವು ಸತ್ತು ಹೋಯಿತು.

೧ ಅರಸುಗಳು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी