ಯಾಕೋಬನು 5:16

ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.

ಸಂದರ್ಭದೊಂದಿಗೆ ಓದಿ · ಯಾಕೋಬನು 5

14ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.

15ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.

16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.

17ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.

18ತಿರಿಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಬೆಳೆಯಿತು.

ಯಾಕೋಬನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी