ಯೋಹಾನನು 4:8

(ಯಾಕಂದರೆ ಆತನ ಶಿಷ್ಯರು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು).

ಸಂದರ್ಭದೊಂದಿಗೆ ಓದಿ · ಯೋಹಾನನು 4

6ಅಲ್ಲಿ ಯಾಕೋಬನ ಬಾವಿ ಇತ್ತು; ಯೇಸು ಪ್ರಯಾಣದಿಂದ ಆಯಾಸಗೊಂಡಿರಲಾಗಿ ಆ ಬಾವಿಯ ಬಳಿಯಲ್ಲಿ ಹಾಗೆಯೇ ಕೂತುಕೊಂಡನು. ಆಗ ಸುಮಾರು ಆರನೇ ತಾಸಾಗಿತ್ತು. (ಅಂದರೆ ಮಧ್ಯಾಹ್ನ ಹನ್ನೆರಡು ಗಂಟೆಯಾ ಗಿತ್ತು).

7ಆಗ ಸಮಾರ್ಯದ ಒಬ್ಬ ಸ್ತ್ರೀಯು ನೀರು ಸೇದುವದಕ್ಕಾಗಿ ಬಂದಳು; ಯೇಸು ಆಕೆಗೆ--ನನಗೆ ಕುಡಿಯುವದಕ್ಕೆ ಕೊಡು ಅಂದನು.

8(ಯಾಕಂದರೆ ಆತನ ಶಿಷ್ಯರು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು).

9ಅದಕ್ಕೆ ಆ ಸಮಾ ರ್ಯದ ಸ್ತ್ರೀಯು ಆತನಿಗೆ--ನೀನು ಯೆಹೂದ್ಯನಾಗಿದ್ದು ಕುಡಿಯುವದಕ್ಕೆ ಕೊಡು ಎಂದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕೇಳುವದು ಹೇಗೆ? ಯಾಕಂದರೆ ಯೆಹೂದ್ಯರು ಸಮಾರ್ಯದವರೊಂದಿಗೆ ಹೊಕ್ಕು ಬಳಿಕೆ ಮಾಡುವದಿಲ್ಲವಲ್ಲಾ ಅಂದಳು.

10ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.

ಯೋಹಾನನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी