೧ ಸಮುವೇಲನು 25:34

ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 25

32ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ.

33ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ.

34ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.

35ಅವಳು ತನಗೆ ತಂದ ದ್ದನ್ನು ದಾವೀದನು ಅವಳ ಕೈಯಿಂದ ತಕ್ಕೊಂಡು ಅವಳಿಗೆ--ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ಇಗೋ, ನಾನು ನಿನ್ನ ಮಾತನ್ನು ಕೇಳಿ ನಿನ್ನ ವಿಜ್ಞಾಪನೆಯನ್ನು ಅಂಗೀಕರಿಸಿದೆನು ಅಂದನು.

36ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ.

೧ ಸಮುವೇಲನು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी