ಯಾಕಂದರೆ ಯೋಹಾನನು ಅದುವರೆಗೆ ಸೆರೆಯಲ್ಲಿ ಹಾಕಲ್ಪಟ್ಟಿರಲಿಲ್ಲ.
22ಇವುಗಳಾದ ಮೇಲೆ ಯೇಸುವೂ ಆತನ ಶಿಷ್ಯರೂ ಯೂದಾಯ ದೇಶಕ್ಕೆ ಬಂದರು; ಅಲ್ಲಿ ಆತನು ಅವರೊಂದಿಗೆ ಇದ್ದು ಬಾಪ್ತಿಸ್ಮ ಮಾಡಿಸುತ್ತಿದ್ದನು.
23ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.
24ಯಾಕಂದರೆ ಯೋಹಾನನು ಅದುವರೆಗೆ ಸೆರೆಯಲ್ಲಿ ಹಾಕಲ್ಪಟ್ಟಿರಲಿಲ್ಲ.
25ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.
26ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ