ಯೆಶಾಯ 14:20

ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ.

ಸಂದರ್ಭದೊಂದಿಗೆ ಓದಿ · ಯೆಶಾಯ 14

18ಜನಾಂಗಗಳ ಅರಸುಗಳೆಲ್ಲಾ ಅವರೆಲ್ಲರೂ ವೈಭವ ದಿಂದ ತಮ್ಮತಮ್ಮ ಮನೆಗಳಲ್ಲಿ ಮಲಗುತ್ತಾರೆ.

19ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.

20ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ.

21ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.

22ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಯೆಶಾಯ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी