ಎಫೆಸದವರಿಗೆ 6:20

ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.

ಸಂದರ್ಭದೊಂದಿಗೆ ಓದಿ · ಎಫೆಸದವರಿಗೆ 6

18ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.

19ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.

20ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.

21ಆದರೆ ನನ್ನ ವಿಷಯಗಳು ನಿಮಗೆ ಸಹ ಗೊತ್ತಾ ಗುವ ಹಾಗೆಯೂ ನಾನು ಹೇಗಿದ್ದೇನೆಂದು ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.

22ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.

ಎಫೆಸದವರಿಗೆ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी