ನಾನು ನನ್ನ ಪ್ರಿಯನವಳು; ಅವನ ಇಚ್ಛೆಯು ನನ್ನ ಕಡೆಗಿರುವದು.
8ನಾನು ಖರ್ಜೂರದ ಮರದ ಬಳಿಗೆ ಹೋಗಿ ಅದರ ಗರಿಗಳನ್ನು ಹಿಡುಕೊಳ್ಳುವೆ ಅಂದುಕೊಂಡೆನು. ಇದಲ್ಲದೆ ಈಗ ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲು ಗಳ ಹಾಗೆಯೂ ನಿನ್ನ ಮೂಗಿನ ವಾಸನೆಯು ಸೇಬುಹಣ್ಣಿನ ಹಾಗೆಯೂ ಇರುವವು.
9ನಿನ್ನ ಬಾಯಿಯ ಅಂಗಳವು ನನ್ನ ಪ್ರಿಯನ ಉತ್ತಮವಾದ ದ್ರಾಕ್ಷಾರಸದ ಹಾಗಿರುವದು. ಅದು ಸಿಹಿಯಾಗಿ ಹೋಗುವಂಥದ್ದು, ನಿದ್ರೆಮಾಡುವವರ ತುಟಿಗಳನ್ನು ಮಾತಾಡಿಸುವಂಥದ್ದು.
10ನಾನು ನನ್ನ ಪ್ರಿಯನವಳು; ಅವನ ಇಚ್ಛೆಯು ನನ್ನ ಕಡೆಗಿರುವದು.
11ನನ್ನ ಪ್ರಿಯನೇ, ನಾವು ಹೊಲಕ್ಕೆ ಹೋಗಿ ಗ್ರಾಮಗಳಲ್ಲಿ ವಸತಿಯಾಗಿರುವ ಬಾ.
12ನಾವು ಉದಯದಲ್ಲಿ ಎದ್ದು,ದ್ರಾಕ್ಷೇ ತೋಟಗಳಿಗೆ ಹೋಗಿ, ದ್ರಾಕ್ಷೇ ಬಳ್ಳಿಯು ಬೆಳೆಯುವದೋ? ಅದರ ಎಳೆಗಾಯಿಗಳು ಕಾಣಿ ಸುತ್ತವೋ? ದಾಳಿಂಬರ ಗಿಡಗಳು ಚಿಗುರುತ್ತವೋ ನೋಡುವ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ತೋರಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ