ಯೋಹಾನನು 8:40

ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ.

ಸಂದರ್ಭದೊಂದಿಗೆ ಓದಿ · ಯೋಹಾನನು 8

38ನನ್ನ ತಂದೆಯ ಬಳಿ ಯಲ್ಲಿ ನಾನು ನೋಡಿದ್ದನ್ನೇ ಮಾತನಾಡುತ್ತೇನೆ; ನೀವು ನಿಮ್ಮ ತಂದೆಯ ಬಳಿಯಲ್ಲಿ ನೋಡಿದ್ದನ್ನು ಮಾಡುತ್ತೀರಿ ಅಂದನು.

39ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.

40ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ.

41ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.

42ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.

ಯೋಹಾನನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी