ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು.
2ನಾನು ನಿಮಗೆ ಸುಬೋಧನೆಯನ್ನು ಮಾಡುವೆನು; ನೀವು ನನ್ನ ಕಟ್ಟಳೆಯನ್ನು ಬಿಡಬೇಡಿರಿ.
3ನಾನು ಕೋಮಲನೂ ನನ್ನ ತಾಯಿಯ ದೃಷ್ಟಿಯಲ್ಲಿ ಪ್ರಿಯನಾಗಿ ಒಬ್ಬನೇ ಆಗಿದ್ದು ನನ್ನ ತಂದೆಯ ಮಗ ನಾಗಿದ್ದೇನೆ.
4ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು.
5ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ.
6ಅವುಗಳನ್ನು ತ್ಯಜಿಸ ದಿದ್ದರೆ ಅವು ನಿನ್ನನ್ನು ಕಾಯುವವು, ಅವುಗಳನ್ನು ಪ್ರೀತಿಸಿದರೆ ಅವು ನಿನ್ನನ್ನು ಕಾಪಾಡುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ