೧ ಅರಸುಗಳು 6:36

ಅವನು ಒಳಗಿನ ಅಂಗಳವನ್ನು ಕಟ್ಟಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 6

34ಅದರ ಎರಡು ಕದಗಳು ತುರಾಯಿ ಮರದ ಹಲಿಗೆಗಳಾಗಿದ್ದವು. ಒಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಮತ್ತೊಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಇತ್ತು.

35ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು.

36ಅವನು ಒಳಗಿನ ಅಂಗಳವನ್ನು ಕಟ್ಟಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.

37ನಾಲ್ಕನೇ ವರುಷದ ಜೀಪ್‌ ತಿಂಗಳಲ್ಲಿ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟಿತು.

38ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್‌ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.

೧ ಅರಸುಗಳು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी