ಯೆರೆಮಿಯ 27:15

ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 27

13ಬಾಬೆಲಿನ ಅರಸನಿಗೆ ಸೇವೆ ಮಾಡದ ಜನಾಂಗಕ್ಕೆ ವಿರೋಧವಾಗಿ ಕರ್ತನು ಮಾತ ನಾಡಿದ ಪ್ರಕಾರ--ನೀನೂ ನಿನ್ನ ಜನರೂ ಯಾಕೆ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರಿ?

14ಆದದರಿಂದ ಬಾಬೆಲಿನ ಅರಸನಿಗೆ ನೀವು ಸೇವೆಮಾಡಬೇಡಿರೆಂದು ನಿಮಗೆ ಹೇಳುವ ಪ್ರವಾದಿಗಳ ವಾಕ್ಯಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.

15ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.

16ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.

17ಅವರಿಗೆ ಕಿವಿಗೊಡ ಬೇಡಿರಿ; ಬಾಬೆಲಿನ ಅರಸನಿಗೆ ಸೇವೆಮಾಡಿ ಬದುಕಿರಿ; ಈ ಪಟ್ಟಣವು ಯಾಕೆ ಹಾಳಾಗಬೇಕು?

ಯೆರೆಮಿಯ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी